ಬೈಕ್ ವೀಲಿಂಗ್ : ನಾಲ್ವರ ಬಂಧನ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕಾಲೇಜು ಯುವತಿಯರು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬೈಕ್ ವೀಲಿಂಗ್ ಮಾಡಿದ ನಾಲ್ಕು ಮಂದಿ ಯುವಕರನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿ  ಬೈಕನ್ನು ವಶಪಡಿಸಿಕೊಂಡಿದ್ದಾರೆ. ಯುವಕರು ವೀಲೀಂಗ್ ಮಾಡುತ್ತಾ ರಸ್ತೆಯಲ್ಲಿ ಸ್ಟಂಟ್ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಯುವತಿಯರು ಆತಂಕಗೊಂಡು ಭಯಭೀತರಾಗಿದ್ದರೆನ್ನಲಾಗಿದೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ, ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿ ಪ್ರಯಾಣಿಕರಿಗೆ ತೊಂದರೆ ನೀಡಿದ ಹಿನ್ನೆಲೆಯಲ್ಲಿ ಯುವಕರನ್ನು ಬಂಧಿಸಲಾಗಿದೆ.