15 ವರ್ಷದ ಬಾಲಕಿ ಮೇಲೆ ಬಾಲಕನಿಂದ ನಿರಂತರ ರೇಪ್

ಸಾಂದರ್ಭಿಕ ಚಿತ್ರ

ಮುಂಬೈ : ಹದಿನೈದು ವರ್ಷ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಸಹಪಾಠಿಯೊಬ್ಬ ನಿರಂತರವಾಗಿ ಅತ್ಯಾಚಾರವೆಸಗಿದ್ದರಿಂದ ಬಾಲಕಿ ಗರ್ಭವತಿಯಾದ ಹೇಯ ಘಟನೆ ವರದಿಯಾಗಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.

ನಗರದ ಜುಹು ಪ್ರದೇಶದಲ್ಲಿರುವ ಶಾಲೆಯ ಆವರಣದಲ್ಲಿ ಘಟನೆ ನಡೆದಿದ್ದು, ಅನಾರೋಗ್ಯದಿಂದಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ 13 ವಾರಗಳ ಗರ್ಭವತಿಯಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ಶಾಲೆಯಲ್ಲಿ ಓದುತ್ತಿರುವ ಆರೋಪಿ ಬಾಲಕ ಮತ್ತು ಬಾಲಕಿ ಪರಸ್ಪರ ಪರಿಚಿತರಾಗಿದ್ದಾರೆ. ಶಾಲೆಯಲ್ಲಿರುವ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಸೆಕ್ಸ್ ನಡೆಸುತ್ತಿದ್ದರು ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತದನಂತರ, ಆರೋಪಿ ಬಾಲಕ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ತಿಳಿಸುವುದಾಗಿ ಪ್ರತಿನಿತ್ಯ ಬಾಲಕಿಯನ್ನು ಹೆದರಿಸಿ ಅತ್ಯಾಚಾರವೆಸಗುತ್ತಿದ್ದನು ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.