ಕಾರು ನಿಲ್ಲಿಸಿ ಮದ್ಯ ಸೇವನೆ, ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಪುತ್ತೂರು : ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಪಾನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದು ಅಪರಾಧವಾಗಿರುವ ಕಾರಣ ಇಬ್ಬರು ಆರೋಪಿಗಳಾದ ಪುತ್ತೂರು ಬಪ್ಪಳಿಗೆ ಕರ್ಕುಂಜ ನಿವಾಸಿ ರಾಹುಲ್ ಹಾಗೂ ಸಕಲೇಶಪುರ ಬಾಳಗದ್ದೆ ನಿವಾಸಿ ಹರೀಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನ ನಡೆಸಿದ್ದು ಪೊಲೀಸರು ಬೆನ್ನಟ್ಟಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ಬಾಟಲಿ ಮದ್ಯ ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.