ಎಎಸ್ಐ ಐತಪ್ಪರಿಗೆ ಹಲ್ಲೆ : ಇಬ್ಬರು ಅರೆಸ್ಟ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಉರ್ವ ಪೊಲೀಸ್ ಠಾಣಾ ಎಎಸ್‍ಐ ಐತಪ್ಪನವರ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಠಾಣಾ ಪೊಲೀಸರು ಶಮೀರ್ ಕಾಟಿಪಳ್ಳ ಮತ್ತು ಸುರತ್ಕಲ್ ಕಾನ ನಿವಾಸಿ ನಿಯಾಝ್ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಖಚಿತಪಡಿಸುತ್ತಿಲ್ಲ.

ಲೇಡಿಹಿಲ್ ಬಳಿ ಐತಪ್ಪನವರು ಬೆಳಗ್ಗಿನ ಜಾವ ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಇವರ ಮೇಲೆ ರಾಡಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಪಿಗಳ ಪತ್ತೆಗೆ ನಗರ ಪೊಲೀಸ್ ಕಮಿಷನರ್ ಚಂದ್ರಶೇಖರ್ ಅವರು ಮೂರು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿದ್ದರು.

ಸ್ಟೇಟ್ ಬ್ಯಾಂಕ್ ಬಳಿ ಪಿ ಎಫ್ ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜಿಗೆ ಪ್ರತೀಕಾರವಾಗಿ ಈ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.