ಗಾಂಜಾ : ಇಬ್ಬರ ಸೆರೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅಕ್ರಮ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕಾಪಿಕಾಡ್ ರಸ್ತೆ ಬಳಿ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಗಳನ್ನು ಬಂಧಿಸಿದರು.

ಬಂಧಿತ ಆರೋಪಿಗಳನ್ನು ಬಂಟ್ವಾಳದ ಅಂಸಾದ್ ಸಿ ಎಚ್ (27), ಕಾಸರಗೋಡಿನ ಉದಯಕುಮಾರ್ ರೈ (30) ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಕೇಜಿ ಗಾಂಜಾ ಮತ್ತು ಮೂರು ಮೊಬೈಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕೇರಳದ ಇಡುಕ್ಕಿ ಜಿಲ್ಲೆಯಿಂದ ಆರೋಪಿಗಳು ಗಾಂಜಾವನ್ನು ಖರೀದಿ ಮಾಡಿ ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.