ಅಕ್ರಮ ಮದ್ಯ : ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ಟಪ್ಪಾಲುಕೊಟ್ಟಿಗೆ ಎಂಬಲ್ಲಿ ಶೇಂದಿ ಅಂಗಡಿ ಬಳಿ ಅಕ್ರಮವಾಗಿ ಮದ್ಯ ಮಾರಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೆÇಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೃಷ್ಣ ಮತ್ತು ಸುರೇಶ್ ಎಂಬಿಬ್ಬರು ಬಂಧಿತ ಆರೋಪಿಗಳಾಗಿದ್ದು, ಆರೋಪಿತರು ಅಕ್ರಮವಾಗಿ ಮದ್ಯ ದಾಸ್ತಾನಿರಿಸಿಕೊಂಡು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 28 ಬಾಟ್ಲಿ ಮದ್ಯವನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.