ಯುವತಿಗೆ ಲೈಂಗಿಕ ಕಿರುಕುಳ, ಹಲ್ಲೆ ನಡೆಸಿದ ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರ ಹೊರವಲಯದ ಅದ್ಯಪಾಡಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿ ಮತ್ತು ಅವರ ಸಹೋದ್ಯೋಗಿ ಮೇಲೆ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಜಪೆ ಪೊಲೀಸರು ಅದ್ಯಪಾಡಿ ನಿವಾಸಿಗಳಾದ ಶೇಖರ ಶೆಟ್ಟಿ ಹಾಗೂ ರಕ್ಷಿತ್ ಎಂಬವರನ್ನು ಬಂಧಿಸಿದ್ದಾರೆ.

ಇವರಿಬ್ಬರಿಗೂ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ರಾತ್ರಿ 12.30ಕ್ಕೆ ಸಹೋದ್ಯೋಗಿಗಳು ಕಾರಿನಲ್ಲಿ ಬರುತ್ತಿರುವಾಗ ಬೈಕ್‍ನಲ್ಲಿ ಬೆನ್ನಟ್ಟಿಸಿಕೊಂಡು ಬಂದ ಯುವಕರ ತಂಡ ಇವರಿಬ್ಬರ ಮೇಲೆ ಹಲ್ಲೆ ನಡೆಸಿತ್ತು. ಅಲ್ಲದೆ ಯುವತಿ ಮೇಲೆ ಕೈಹಾಕಿ ಲೈಂಗಿಕ ದೌರ್ಜನ್ಯ ಎಸಗಿತ್ತು ಎಂದು ಆರೋಪಿಸಲಾಗಿತ್ತು.

 

LEAVE A REPLY