ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಎರಡು ದಿನಗಳ ಹಿಂದೆಯಷ್ಟೇ ಪುತ್ತೂರಿನಲ್ಲಿ ವ್ಯಾಪಕ ಗಾಂಜಾ ಜಾಲದ ಕುರಿತು ವರದಿ ಪ್ರಕಟವಾದ ಬೆನ್ನಲ್ಲೇ ಇದೀಗ ಮಂಗಳೂರಿನ ಕಾಲೇಜು ಪರಿಸರದಲ್ಲಿ ಗಾಂಜಾ ಮಾರಾಟ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೌಶಿಕ್ ಮತ್ತು ರವಿಕಿರಣ್ ಬಂಧಿತ ಆರೋಪಿಗಳಾಗಿದ್ದು, ಕೊಟ್ಟಾರದಲ್ಲಿರುವ ಖಾಸಗಿ ಕಾಲೇಜೊಂದರ ಸಮೀಪ ಗಾಂಜಾವನ್ನು ತಂದಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಸಂದರ್ಭದಲ್ಲೇ ರೆಡ್‍ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಾವೂರು ಠಾಣಾ ಪೊಲೀಸರು ಗಾಂಜಾ ಮಾರಾಟಕ್ಕೆ ಸಿದ್ಧರಾಗಿದ್ದ ಕೌಶಿಕ್, ರವಿಕಿರಣ್‍ನನ್ನು ಬಂಧಿಸಿದ್ದಾರೆ. ಇವರಿಂದ 50 ಗ್ರಾಂ ಗಾಂಜಾ, 1 ಸಾವಿರ ರೂ ನಗದು, ಸ್ಕೂಟರ್, ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದಾರೆ.