ಗಾಂಜಾ ಸಹಿತ ಇಬ್ಬರ ಸೆರೆ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಅಕ್ರಮ ಗಾಂಜಾ ಸಾಗಾಟ ಪ್ರಕರಣ ಬೇಧಿಸಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತರನ್ನು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಇಮ್ರಾನ್ ಎನ್ ಹಾಗೂ ಸಾಲೆತ್ತೂರು-ಮೆದು ಎಂಬಲ್ಲಿನ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಜಲಾಲುದ್ದೀನ್ ಎಂದು ಹೆಸರಿಸಲಾಗಿದೆ.

ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ವೃತ್ತ ನಿರೀಕ್ಷಕ ಬಿ ಕೆ ಮಂಜಯ್ಯ ನೇತೃತ್ವದ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳ ಸಹಿತ ಒಂದು ಕೇಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಆರೋಪಿಗಳನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.