ರಿಕ್ಷಾ ಮೇಲೆ ಮರ ಬಿದ್ದು ಇಬ್ಬರು ಆಸ್ಪತ್ರೆಗೆ

ಅಟೋದ ಮೇಲೆ ಮರ ಬಿದ್ದಿರುವುದು

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಗಾಯಗಳೊಂದಿಗೆ ಆಸ್ಪತ್ರೆ ದಾಖಲಾಗಿದ್ದಾರೆ.

ಆಟೋ ಚಾಲಕ ಮೂಡಂಬೈಲ್‍ನ ಈಶ್ವರ (35) ಮತ್ತು ಪ್ರಯಾಣಿಕ ಅಡ್ಯನಡ್ಕದ ರಾಮು (62) ಗಾಯಗೊಂಡಿದ್ದು, ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ಅಡ್ಯನಡ್ಕದಲ್ಲಿ ಈ ದುರ್ಘಟನೆ ಘಟನೆ ಸಂಭವಿಸಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಅರಣ್ಯ ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸಿದ ಬಳಿಕ ಸಂಚಾರ ಪುನರಾರಂಭಗೊಂಡಿತು.