ಉಡುಪಿ ಡೀಸಿ, ಎಸಿ ಕೊಲೆ ಯತ್ನ : ಇನ್ನಿಬ್ಬರ ಬಂಧನ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಕಂಡ್ಲೂರಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಮತ್ತು ಕುಂದಾಪುರ ಎಸಿ ಶಿಲ್ಪಾನಾಗ್ ಸೇರಿದಂತೆ ಇತರರ ಮೇಲೆ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬುಧವಾರ ತಡರಾತ್ರಿ ಆರೋಪಿಗಳಾದ ಕಂಡ್ಲೂರಿನ ಬೆಟ್ಟೆ ಶಾಹಿದ್ (28) ಮತ್ತು ಮುದಾಸಿರ್ (30) ಎಂಬವರನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 26 ಆಗಿದೆ. ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.