ಬೈಕಿಗೆ ಪಿಕಪ್ ವ್ಯಾನ್ ಡಿಕ್ಕಿ ವಿದ್ಯಾರ್ಥಿಗಳಿಬ್ಬರು ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಪೆಯಿನಾಚಿ ಪೆಟ್ರೋಲ್ ಬಂಕ್ ಬಳಿ ಪಿಕಪ್ ವ್ಯಾನ್ ಮತ್ತು ಬೈಕ್ ಡಿಕ್ಕಿ ಹೊಡೆದು ಸವಾರ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ಪೆರಿಯ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಾದ ಪರವನಡ್ಕ ನಿವಾಸಿಗಳಾದ ಮುಹಮ್ಮದ್ ಇರ್ಫಾನ್ (23) ಮತ್ತು ಅನಸುದ್ದೀನ್ (23) ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.