ಯುವತಿ, ಮಹಿಳೆ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

  ಎರಡು ಪ್ರತ್ಯೇಕ ಪ್ರಕರಣ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ವಿವಾಹಿತೆ ಮತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಮತ್ತು ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಬಸ್ತಿ 5 ಸೆಂಟ್ಸ್ ದಲಿತ ಕಾಲೊನಿ ನಿವಾಸಿ ವಸಂತ ಹರಿಜನ ಎಂಬವರ ಮಗಳು ಸ್ವಾತಿ(18)ಯು ಅಪೆಂಡಿಕ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ತಂದೆ ವಸಂತ ಹರಿಜನ ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿ ಬ್ರಹ್ಮಾವರ ಸಮೀಪದ ಆರೂರು ಗ್ರಾಮದ ಕುಂಜಾಲು ಮೇಲಡ್ಪು ಮೇಲ್ಮನೆ ನಿವಾಸಿ ದಿವಂಗತ ಪ್ರಭಾಕರ ಶೆಟ್ಟಿ ಪತ್ನಿ ಜಯಂತಿ ಶೆಟ್ಟಿ (51) ಮನೆಯ ಕೆಳಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಮಗ ಆರೂರು ಸುಕೇಶ್ ಶೆಟ್ಟಿ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY