2 ದೇವಸ್ಥಾನದಲ್ಲಿ ಕಳವು

ನಮ್ಮ ಪ್ರತಿನಿಧಿ ವರದಿ

ಕುಮಟಾ : ಬುಧವಾರ ತಡರಾತ್ರಿ ತಾಲೂಕಿನ ದುಂಡಕುಳಿಯ ಶ್ರೀ ಬೊಂಬೆಲಿಂಗೇಶ್ವರ ದೇವಸ್ಥಾನ ಹಾಗೂ ಮಿರ್ಜಾನಿನ ಶ್ರೀ ದುರ್ಗಾದೇವಿ ದೇವಸ್ಥಾನಗಳ ಬೀಗ ಮುರಿದು ಒಳನುಗ್ಗಿದ ಕಳ್ಳರು ಸಾವಿರಾರು ರೂ ಮೌಲ್ಯದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ದೇವಸ್ಥಾನಗಳ ಪ್ರಧಾನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಮಿರ್ಜಾನ ದೇವಸ್ಥಾನದ 6,000 ರೂ ಮೌಲ್ಯದ ಚಿನ್ನದ ಮಾಂಗಲ್ಯ ಮತ್ತು ದುಂಡಕುಳಿ ದೇವಸ್ಥಾನದಲ್ಲಿ 4,000 ರೂ ಮೌಲ್ಯದ ಬೆಳ್ಳಿ ಆಭರಣಗಳು ಸೇರಿದಂತೆ ಒಟ್ಟೂ 10,000 ರೂ ಮೌಲ್ಯದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಗುರುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಿರುವುದನ್ನು ಕಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.