ಕಂಟೈನರ್-ಕಾರು ಡಿಕ್ಕಿ : ನಾಲ್ವರು ಪಾರು

 

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿ ಜಂಕ್ಷನ್ ಬಳಿ ಕಾರು ಮತ್ತು ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

container

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರಿನ ಒಂದು ಪಾಶ್ರ್ವ ಹಾನಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಹೆದ್ದಾರಿ ಸ್ವಲ್ಪ ಹೊತ್ತು ಟ್ರಾಫಿಕ್ ವ್ಯತ್ಯಯಗೊಂಡಿದ್ದು, ಸ್ಥಳೀಯರು ಕೂಡಲೇ ವಾಹನವನ್ನು ಬದಿಗಿರಿಸಿ ಸಂಚಾರ ಸುಗಮಗೊಳಿಸಿದರು. ಕೊನೆಗೆ ಎರಡೂ ಕಡೆಯವರು ಪ್ರಕರಣವನ್ನು ರಾಜಿಯಲ್ಲಿ ಮುಗಿಸಿದರು.