ಸರಣಿ ಅಪಘಾತ ನಾಲ್ವರು ಪಾದಚಾರಿಗಳು ಆಸ್ಪತ್ರೆಗೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಕಾಞಂಗಾಡ್ ನಗರದಲ್ಲಿ ಒಂದೇ ಸಮಯದಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೀಡಾಗಿ ನಾಲ್ವರು ಪಾದಚಾರಿಗಳು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ಬೆಳಿಗ್ಗೆ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಸಂದರ್ಭ ಅಪಘಾತಕ್ಕೆ ಕಾರಣವಾದ ಕಾರು ನಿಲ್ಲಿಸದೇ ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.