ಪ್ರವೇಶ ಕೊರತೆ : ಐದು ಖಾಸಗಿ ಇಂಜಿನಿಯರಿಂಗ್ ಕಾಲೇಜು ಬಂದ್

ಬೋಪಾಲ : ಕಳೆದ ಐದು ವರ್ಷಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಕುಂಠಿತವಾಗಿರುವ ಛತ್ತೀಸಗಢ ಮತ್ತು ಮಧ್ಯಪ್ರದೇಶದ ಐದು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಮುಚ್ಚಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾಲೇಜು ಆಡಳಿತವು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಅನುಮತಿ ಕೋರಿದೆ. ವಿದ್ಯಾರ್ಥಿಗಳ ಪ್ರವೇಶ ಕೊರತೆ ಎದುರಿಸುತ್ತಿದ್ದ ರಾಜ್ಯದ 16 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಕಳೆದ ಎರಡು ವರ್ಷದ ಅವಧಿಯಲ್ಲಿ ಮುಚ್ಚಲ್ಪಟ್ಟಿವೆ.