ವ್ಯಾನ್ ಮರಕ್ಕೆ ಡಿಕ್ಕಿ ; ಆರು ಮಂದಿ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಚಾಲಕನ ನಿಯಂತ್ರಣ ತಪ್ಪಿದ ವ್ಯಾನೊಂದು ಮರಕ್ಕೆ ಡಿಕ್ಕಿ ಹೊಡೆದು ಆರು ಮಂದಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಮಂಜೇಶ್ವರಕ್ಕೆ ಸಮೀಪದ ಮೊರತ್ತಣ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹೊಸಂಗಡಿಯಿಂದ ಕರ್ನಾಟಕಕ್ಕೆ ಆರು ಮಂದಿ ಸಂಚರಿಸುತಿದ್ದ ಇಕೋ ವ್ಯಾನ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.