6 ಕಿಲೋ ಗಾಂಜಾ, 2 ಕಾರು ಸಹಿತ ಇಬ್ಬರು ಪೊಲೀಸ್ ವಶ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಪೆÇಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎರಡು ಕಾರುಗಳಲ್ಲಿ ಸಾಗಿಸಲಾಗುತ್ತಿದ್ದ ಆರು ಕಿಲೋ ಗಾಂಜಾ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಆದೂರು ಪೆÇಲೀಸರು ಯಶಸ್ವಿಯಾಗಿದ್ದಾರೆ.

ಗಾಂಜಾ ಸಾಗಾಟದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕೊಲ್ಲಂ ಕೊಟ್ಟಾರಕ್ಕರ ನಿವಾಸಿ ಶಿಬಿನ್ (23) ಹಾಗೂ ಉದುಮ ಅರಮಂಗಾನದ ಆಹ್ಮದ್ (32) ಎಂಬವರನ್ನು ಬಂಧಿಸಲಾಗಿದೆ. ಮೊದಲು ಆಹ್ಮದ್ ಎಂಬಾತ ಸಂಚರಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದ ಪೆÇಲೀಸರು ಆತನನ್ನು ವಿಚಾರಿಸಿದಾಗ ಗಾಂಜಾ ಸಾಗಾಟ ಮಾಡುತ್ತಿರುವ ಮಾಹಿತಿ ಲಭಿಸಿದೆ. ಆತನ ಕಾರಿನಲ್ಲಿ ಎರಡು ಕಿಲೋ ಗಾಂಜಾ ಪತ್ತೆಯಾಗಿತ್ತು. ಬಳಿಕ ಆತ ನೀಡಿದ ಮಾಹಿತಿ ಪ್ರಕಾರ ಮತ್ತೊಂದು ಕಾರಿನಲ್ಲಿ ಗಾಂಜಾ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಲಾಯಿತು. ಇತರ ಇಬ್ಬರು ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸುತ್ತಿರುವುದಾಗಿ ಪೆÇಲೀಸರು ತಿಳಿಸಿದ್ದಾರೆ. ತಮಿಳ್ನಾಡಿನ ತೇನಿ ಎಂಬಲ್ಲಿಂದ ಗಾಂಜಾ ತಂದಿರುವುದಾಗಿ ಆರೋಪಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.


ಗಾಂಜಾ ಮಾರಾಟ, ಆರೋಪಿ ಸೆರೆ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ಬಂಧಿಸಿದ ಘಟನೆ ಇಲ್ಲಿನ ನಗರ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ನಂದಾವರ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಬಂಧಿತ ಆರೋಪಿಯನ್ನು ತೊಕ್ಕೋಟು ಸಮೀಪದ ಕುತ್ತಾರು ಎಂಬಲ್ಲಿನ ನಿವಾಸಿ ಜಮಾಲ್ ಎಂದು ಹೆಸರಿಸಲಾಗಿದೆ. ಈತ ನಂದಾವರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈತನಿಂದ 200 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.