ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕರಾವಳಿ ಅಲೆ ವರದಿ

ಬಂಟ್ವಾಳ : ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ 2006ರಿಂದ ತಲೆಮರೆಸಿ ಕೊಂಡಿದ್ದ ಆರೋಪಿ ತಾಲೂಕಿನ ಶಂಭೂರು ಗ್ರಾಮದ ಕೊಪ್ಪಳ ಎಂಬಲ್ಲಿನ ನಿವಾಸಿ ಲತೀಫ್ ಅಲಿಯಾಸ್ ಅಬ್ದುಲ್ ಲತೀಫ್ ಬಿನ್ ಯೂಸುಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ,

ಕಳೆದ 12 ವರ್ಷದಿಂದ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಮೈಂದಾಳ ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

LEAVE A REPLY