ರಸ್ತೆ ಅಪಘಾತದ ಗಾಯಾಳು ಸಾವು

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದ ಕದ್ರಿ ದೇವಸ್ಥಾನದ ಬಳಿ ಎ 16ರಂದು ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅನಿಲ್ ವರ್ಗೀಸ್ (43) ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾರೆ.

ಅನಿಲ್ ವರ್ಗೀಸ್ ಮೂಲತಃ ಕೇರಳದವರಾಗಿದ್ದು, ಪ್ರಸ್ತುತ ಸುರತ್ಕಲ್ಲಿನಲ್ಲಿ ವಾಸ್ತವ್ಯ ಹೂಡಿದ್ದರು. ಎಂ ಆರ್ ಪಿ ಎಲ್ ಉದ್ಯೋಗಿಯಾಗಿದ್ದ ಇವರು ಎ 16ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರವ ಪತ್ನಿ ಸ್ಮಿತಾ ಅವರನ್ನು ಕರೆದೊಯ್ಯಲು ಸ್ಕೂಟರಿನಲ್ಲಿ ಆಸ್ಪತ್ರೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY