ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತ

ಮೃತ ಲತೀಫ್

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಕಾರು ಹಾಗೂ ಸ್ಕೂಟರ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಚೆಂಗಳ ತೈವಳಪ್ಪು ಬೀರಾನ್ ಕುಂಞÂ ಎಂಬವರ ಪುತ್ರ ಲತೀಫ್ (35) ಮೃತ ದುರ್ದೈವಿ. ಡಿಸೆಂಬರ್ 27ರಂದು ರಾತ್ರಿ ನಾಯ್ಮಾರಮೂಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲತೀಫ್ ಚಲಾಯಿಸುತ್ತಿದ್ದ ಸ್ಕೂಟರಿಗೆ ಎದುರಿನಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಉಂಟಾಗಿತ್ತು. ಕೂಡಲೇ ಲತೀಫನನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಲತೀಫ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.