ಹಳೆ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಕಳವು ಪ್ರಕರಣದಲ್ಲಿ ಅರೋಪಿಯಾಗಿ ಬಂಧಿಸಲ್ಪಟ್ಟು ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಪುತ್ತೂರು ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರೌಡಿ ನಿವಾಸಿ ಮೊಯಿದಿನ್ ಅಲಿಯಾಸ್ ಉಂಞÂ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಅಕ್ಟೋಬರ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.