ಆ್ಯಸಿಡ್ ಎರಚಿ ಓಡಿದ್ದವ 21 ವರ್ಷ ಬಳಿಕ ಬಂಧನ

ನಮ್ಮ ಪ್ರತಿನಿಧಿ ವರದಿ

ಬೆಳ್ತಂಗಡಿ : ಸುಮಾರು 21 ವರ್ಷಗಳ ಹಿಂದೆ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯೊಬ್ಬನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಕಡಿರುದ್ಯಾವರ ನಿವಾಸಿ ಶಂಕರ ಗೌಡ (63) ಎಂದು ಗುರುತಿಸಲಾಗಿದೆ. ಆರೋಪಿ ಶಂಕರಗೌಡನು ಗಣೇಶ್ ಪ್ರಭು ಅವರ ಮುಖಕ್ಕೆ ಮತ್ತು ಬಲಗೈಗೆ ಆ್ಯಸಿಡ್ ಎರಚಿದ್ದ. ಗಂಭೀರ ಗಾಯಗೊಂಡಿದ್ದ ಗಣೇಶ್ ಪ್ರಭು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ನಡುವೆ ಆರೋಪಿ ಶಂಕರ ಗೌಡ ಪರಾರಿಯಾಗಿದ್ದ.