ಕೊಲೆ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ

ಮೃತ ದೇವಕಿ

ಕಾಸರಗೋಡು : ಒಬ್ಬಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರ ಶವ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೇಕಲದ ಪೆರಿಯಾಟಡ್ಕದಲ್ಲಿ ನಡೆದಿದೆ.
ಮೃತರನ್ನು ದೇವಕಿ (65) ಎಂದು ಗುರುತಿಸಲಾಗಿದೆ. ಈಕೆ ಒಬ್ಬಂಟಿಯಾಗಿ ತನ್ನ ಮನೆಯಲ್ಲಿ ವಾಸಿಸುತ್ತಿದ್ದು, ಇವರ ಮಕ್ಕಳು ಸಮೀಪದ ಇನ್ನೊಂದು ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಸಂಜೆ ವೇಳೆಗೆ ಇವರ ಪುತ್ರ ಶ್ರೀಧರ ತಾಯಿ ಮನೆಗೆ ಬಂದಾಗ ಅವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಟ್ಟೆಯಿಂದ ಕತ್ತು ಹಿಸುಕಿ ಕೊಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಘಟನೆಯ ಸುದ್ದಿ ತಿಳಿದು ಬೇಕಲ ಠಾಣಾ ಪೆÇಲೀಸರು ಸ್ಥಳಕ್ಕಾಮಿಸಿ ತನಿಖೆ ನಡೆಸಿದರು.
ಬೆರಳಚ್ಚು ತಜ್ಞರು, ಶ್ವಾನ ದಳ ಸ್ಥಳಕ್ಕೆ ತಲುಪಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಕರಣ ದಾಖಲಿಸಲಾಗಿದೆ.