ಕಾರ್ಕಳದಲ್ಲಿ ಅಖಿಲ ಭಾರತ ಪ್ರೊ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಇಂದು ವಿಶ್ವದ ಜನಪ್ರಿಯ ಕ್ರೀಡೆಯಾಗಿರುವ ಕ್ರಿಕೆmನ್ನು ಮೀರಿ ಬೆಳೆಯುತ್ತಿದೆ, ದೇಶದ ವಿವಿಧ ಮಹಾನಗರಗಳಲ್ಲಿ ನಡೆಯುವ ಪ್ರೊ ಕಬಡ್ಡಿ ಪಂದ್ಯಾವಳಿಗಳು ಕಾರ್ಕಳದಂತಹ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರು ಕಾರ್ಕಳದ ತೆಳ್ಳಾರು ಜಲದುರ್ಗಾ ಸ್ಪೋಟ್ರ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಇದರ ಆಶ್ರಯದಲ್ಲಿ ಉದ್ಯಮಿಗಳಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಗಿರೀಶ್ ಶೆಟ್ಟಿ ತೆಳ್ಳಾರು ಇವರ ನೇತೃತ್ವದಲ್ಲಿ ಎ 8ರಂದು ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ನಡೆದ ಅಖಿಲ ಭಾರತ ಪುರುಷರ ಪ್ರೊ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕ್ರೀಡಾರಂಗದಲ್ಲಿ ಸಾಧನೆಗೈದ ರೋಹಿತಕುಮಾರ್ ಕಟೀಲ್, ಅಪ್ಸರಾ ಕಟೀಲ್, ಕಬಡ್ಡಿ ಆಟಗಾರ್ತಿ ಮಮತಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಎರಡು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ವೆಸ್ಟರ್ನ್ ರೈಲ್ವೇ ಮುಂಬಯಿ ಹಾಗೂ ಆಳ್ವಾಸ್ ನಡುವಿನ ಪಂದ್ಯಕ್ಕೆ ಆಯೋಜಕರಾದ ಗಿರೀಶ್ ಶೆಟ್ಟಿ ಚಾಲನೆ ನೀಡಿದರು.

ಈ ಸಂದರ್ಭ ಬಾರ್ಕೂರು ಸಂಸ್ಥಾನಮ್ ಮಠದ ಸಂತೋಷ್ ಭಾರತೀ, ಉದ್ಯಮಿ ಮಹೇಶ್ ಶೆಟ್ಟಿ ತೆಳ್ಳಾರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್, ಮನೋಹರ್ ಶೆಟ್ಟಿ, ಬಂಜಾರ ಪ್ರಕಾಶ್ ಶೆಟ್ಟಿ, ಕಿಶೋರ್ ಆಳ್ವ ಮುಂತಾದವರಿದ್ದರು.