ದೇವಳ ಸೇರಿದ ಪಾದಯಾತ್ರೆ

ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಸಮಿತಿಯ ಅಧ್ಯಕ್ಷ ಸಂದೀಪ ಶೆಟ್ಟಿ ಮರವೂರು ಅವರ ಮುಂದಾಳುತ್ವದಲ್ಲಿ ಮರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ಆರಂಭಗೊಂಡು ಅಮ್ಮನಡೆಗೆ ನಮ್ಮ ನಡೆ ಪಾದಯಾತ್ರೆ ಕಟೀಲು ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

ಸುಮಾರು 30 ಸಾವಿರ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಕಟೀಲು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸರತಿ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಗೊಂದಲವಿಲ್ಲದೆ ದೇವರ ದರ್ಶನ ಪಡೆಯಬಹುದಾಗಿತ್ತು. 20 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 10 ಗಂಟೆ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು ಎಂದು ದೇವಸ್ಥಾನ ಮೂಲಗಳು ತಿಳಿಸಿದೆ.

ರಥ ಬೀದಿಯಲ್ಲಿ ವಾಹನಗಳಿಗೆ ಪ್ರವೇಶ ಇರಲಿಲ್ಲ ಹಾಗೂ ಬÉೈಪಾಸ್ ರಸ್ತೆಯ ಮೂಲಕವಾಗಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕಟೀಲು ಕಾಲೇಜಿನ 150ಕ್ಕೂ ಹೆಚ್ಚು ಸ್ವಯಂಸೇವಕರು