ಮಾರ್ಚ್ 4ರಿಂದ ಸೂಟರಪೇಟೆ ಕೋರ್ದಬ್ಬು ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ಮಾರ್ಚ್ 4ರಿಂದ 7ರವರೆಗೆ ನಡೆಯಲಿದೆ. ವಿಶಿಷ್ಠ ಭೂತಾರಾಧನೆಯ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಕ್ಷೇತ್ರವು ಕಳೆದ ವರ್ಷ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವದಲ್ಲಿ ಸಂಪನ್ನಗೊಂಡಿದ್ದು, ಇದೀಗ ವರ್ಷಾವಧಿ ಉತ್ಸವಕ್ಕೆ ಕ್ಷೇತ್ರವು ಅಣಿಯಾಗಿದೆ.

ಮಾರ್ಚ್ 4ರಂದು ಬೆಳಿಗ್ಗೆ ಹೋಮ ನಂತರ ಶ್ರೀ ಬಬ್ಬುಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ದರ್ಶನ ಸೇವೆಯೊಂದಿಗೆ ಭಂಡಾರ ಏರುವುದು, ಮಧ್ಯಾಹ್ನ ಸ್ಥಳದ ಗುಳಿಗ ದೈವದ ನೇಮ, ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿಮಾನಿಗ ನೇಮೋತ್ಸವ ನಡೆಯಲಿದೆ.

ಮಾರ್ಚ್ 5ರಂದು ಸಂಜೆ ರಾಹುಗುಳಿಗ ನೇಮ, ರಾತ್ರಿ ಶ್ರೀ ಪಂಜುರ್ಲಿ, ಗುಳಿಗ ನೇಮೋತ್ಸವ ಮಾರ್ಚ್ 6ರಂದು ಮಧ್ಯಾಹ್ನ ಧರ್ಮ ದೈವದ ನೇಮ, ರಾತ್ರಿ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ.

ಮಾರ್ಚ್ 7ರಂದು ಮಧ್ಯಾಹ್ನ ಸಂಕಳೆ ಗುಳಿಗ ನೇಮ, ರಾತ್ರಿ ಶ್ರೀ ಕೊರಗಜ್ಜ ನೇಮ ಹಾಗೂ ಭಂಡಾರ ಇಳಿಯುವುದು ಎಂದು ಪ್ರಕಟಣೆ ತಿಳಿಸಿದೆ.