ಡೀಸಿ, ಎಸಿ ಕೊಲೆ ಯತ್ನ : ಇನ್ನೊಬ್ಬ ಆರೋಪಿ ಬಂಧನ

ಉಡುಪಿ : ಜಿಲ್ಲಾಧಿಕಾರಿ, ಸಹಾಯಕ ಆಯುಕ್ತೆ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕಂಡ್ಲೂರಿನ ಸಂಜೀವ ಪೂಜಾರಿ (56) ಬಂಧಿತ.

ಎ 2ರಂದು ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ್ದ ಸಂದರ್ಭದಲ್ಲಿ 50 ಮಂದಿಯ ಗುಂಪು ಇವರ ಮೇಲೆ ಹಲ್ಲೆಗೆ ಮುಂದಾಗಿತ್ತು. ಈ ಸಂದರ್ಭ ಗುಂಪಿನಲ್ಲಿದ್ದ ಮೂವರು ಆರೋಪಿಗಳ ಫೋಟೋವನ್ನು ಜಿಲ್ಲಾಧಿಕಾರಿ ಮೊಬೈಲಿನಲ್ಲಿ ಕ್ಲಿಕ್ಕಿಸಿದ್ದರು. ಈ ಆಧಾರದಲ್ಲಿ ಇದೀಗ ಸಂಜೀವ ಪೂಜಾರಿಯನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಭಾಸ್ಕರ ಮೊಗವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ.

ಸಂಜೀವ ಪೂಜಾರಿಯನ್ನು ಉಡುಪಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.