ರಾಮ ಹುಟ್ಟಿದ್ದಕ್ಕೆ ದಾಖಲೆ ಇಲ್ಲ ಎಂದ ದ್ವಾರಕಾನಾಥ ವಿರುದ್ಧ ಕೇಸ್ ದಾಖಲು

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂಗಳು ಪೂಜಿಸುವ ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕನಾಥ್ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಗಣೇಶ್ ಶೆಟ್ಟಿ ಕಲ್ಲಡ್ಕ ಅವರು ಪ್ರಕರಣ ದಾಖಲಿಸಿದ್ದಾರೆ.

“ಖಾಸಗಿ ಕಾರ್ಯಕ್ರಮದಲ್ಲಿ ದ್ವಾರಕನಾಥ್ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆಯಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ” ಗಣೇಶ್ ಶೆಟ್ಟಿ ಪೊಲೀಸರಿಗೆ ಆಗ್ರಹಿಸಿದ್ದಾರೆ.