`ಪ್ಲಾಸ್ಟಿಕ್ಕಿನಿಂದ ಪರಿಸರ ನಾಶ’

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : “ಪ್ಲಾಸ್ಟಿಕ್ ಉಪಯೋಗದಿಂದ ಪರಿಸರ ನಾಶವಾಗುವುದರೊಂದಿಗೆ ವಿವಿಧ ಸಾಂಕ್ರಾಮಿಕ ರೋಗಗಳಿಗೆ ದಾರಿ ಮಾಡಿ ಕೊಟ್ಟಂತಾಗುತ್ತದೆ” ಎಂದು ಈಶ್ವರ ಶರ್ಮ ನಲ್ಕ ಹೇಳಿದರು.

ಅವರು ಪೆರ್ಲ ನಾಲಂದ ಮಹಾವಿದ್ಯಾಲಯದ ಎನ್ ಎಸ್ ಎಸ್. ಘಟಕದ ವಿಶೇಷ ಶಿಬಿರದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಅದರ ದುಷ್ಪರಿಣಾಮಗಳು ಎಂಬ ವಿಷಯದ ಬಗೆಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ಲಾಸ್ಟಿಕ್ಕಿಗೆ ಬದಲಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿ ಪ್ಲಾಸ್ಟಿಕ್ ನಿಷೇಧಿಸಿದರೆ ಮಾತ್ರ ಪರಿಣಾಮಕಾರಿಯಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ತಾಪಮಾನದ ಏರುವಿಕೆ ಮತ್ತು ಪ್ರಾಕೃತಿಕ ವೈಪರೀತ್ಯಗಳಿಗೆ ಪ್ಲಾಸ್ಟಿಕ್ ಅತಿಯಾದ ಬಳಕೆಯೇ ಕಾರಣ ಎಂದರು.

ಎನ್ ಎಸ್ ಎಸ್ ಅಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡರು.

LEAVE A REPLY