ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಗಾಯತ್ರಿಗೆ ಜಾಮೀನು ನಿರಾಕರಣೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಧನದ ವಿತರಣೆಯಲ್ಲಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಎಸಿಬಿ ಪೊಲೀಸರಿಂದ ದಾಳಿಗೊಳಗಾಗಿ ಬಂಧಿಸಲ್ಪಟ್ಟಿರುವ ವಿಶೇಷ ಭೂಸ್ವಾಧೀನಾಧಿಕಾರಿ ಗಾಯತ್ರಿ ನಾಯಕ್ ಹಾಗೂ ಅವರ ಸಹಾಯಕ ತುಕ್ರಪ್ಪ ಸಲ್ಲಸಿದ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಮೂರನೇ ಸೆಷನ್ಸ್ ನ್ಯಾಯಾಲಯ ಶನಿವಾರ ವಜಾ ಮಾಡಿದೆ.

ಜಾಮೀನು ಅರ್ಜಿಯ ವಿಚಾರಣೆಯನ್ನು ಆಲಿಸಿದ ನ್ಯಾಯಾಧೀಶರಾದ ಉಮಾಪತಿ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಇದೀಗ ಮತ್ತೆ ಅವರನ್ನು ಜ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಆದರೆ ಈ ನಡುವೆ ಅಸೌಖ್ಯದ ಕಾರಣದ ಹಿನ್ನೆಲೆಯಲ್ಲಿ ಗಾಯತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.