ಜಿಲ್ಲೆಯಲ್ಲಿ 3 ದಿನ ನಿಷೇಧಾಜ್ಞೆ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಮೂರು ದಿನ ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೆಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆ, ಸಾರ್ವಜನಿಕ ಸಭೆ ಬಳಿಕ ನಡೆದ ಹರತಾಳದಿಂದ ಉಧ್ಬವಿಸಿದ ಹಿಂಸಾಚಾರಗಳಿಂದ ಸಾರ್ವಜನಿಕರಿಗೆ ಉಂಟಾದ ತೊಂದರೆಯನ್ನು ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೋಲಿಸ್ ಅಧಿಕಾರಿ ತೋಮ್ಸನ್ ಜೋಸ್ ಕೇರಳ ಪೋಲಿಸ್ ಆಕ್ಟ್ 78 ಹಾಗೂ 79ರ ಪ್ರಕಾರ ಬುಧವಾರ ಮದ್ಯಾಹ್ನ 11 ಗಂಟೆಯಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಪ್ರತಿಭಟನಾ ಮೆರವಣಿಗೆ, ಸಾರ್ವಜನಿಕ ಸಭೆ ಮೊದಲಾದವುಗಳಿಗೆ ನಿಷೇಧ ಹೇರಲಾಗಿದೆ. ಆದೇಶ ಮೀರಿ ಯಾವುದಾದರೂ ರಾಜಕೀಯ ಪಕ್ಷಗಳು ಮೆರವಣಿಗೆ ಅಥವಾ ಸಾರ್ವಜನಿಕ ಸಭೆ ನಡೆಸಿದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಲಾಗಿದೆ.