ಬಂಟ್ವಾಳ ವ್ಯಕ್ತಿ ಸೌದಿಯಲ್ಲಿ ಹೃದಯಾಘಾತದಿಂದ ಮೃತ

ಮೃತ ಅಶ್ರಫ್

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ತಾಲೂಕಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರನ್ನು ತಾಲೂಕಿನ ಕಲ್ಲಡ್ಕ ಸಮೀಪದ ಬೋಳಂತೂರು-ಕಲ್ಪಣೆ ನಿವಾಸಿ ದಿವಂಗತ ಇಬ್ರಾಹಿಂ ಹಾಜಿ ಎಂಬವರ ಪುತ್ರ ಮುಹಮ್ಮದ್ ಅಶ್ರಫ್ (48) ಎಂದು ಹೆಸರಿಸಲಾಗಿದೆ.

ಭಾನುವಾರ ರಾತ್ರಿ ಎಂದಿನಂತೆ ಊಟ ಮುಗಿಸಿ ಕೋಣೆಯಲ್ಲಿ ಮಲಗಿದ್ದ ಇವರು ತಡ ರಾತ್ರಿ ವೇಳೆ ಹಠಾತ್ ಕಾಣಿಸಿಕೊಂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಹೌಸ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಕಳೆದ ಆರು ತಿಂಗಳ ಹಿಂದೆಯಷ್ಟೆ ಊರಿಗೆ ಬಂದು ಹೋಗಿದ್ದರು. ಮೃತರು ತಾಯಿ, ಪತ್ನಿ, ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.