ತಲೆಮರೆಸಿಕೊಂಡು ಓಡಾಡುತ್ತಿದ್ದ ಬೈಕ್ ಕಳ್ಳ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದ ಪಂಪ್ವೆಲ್ ಬಳಿ ನಡೆದಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣಾ ಪೊಲೀಸರು ಪಶ್ಚಿಮ ಬಂಗಾಳ ನಿವಾಸಿ ಲತೀಫ್ ಎಂಬಾತನನ್ನು ಬಂಧಿಸಿದ್ದಾರೆ.

2010ರಲ್ಲಿ ಲತೀಫ್ ಬೈಕ್ ಕಳವು ಮಾಡಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆದರೆ ಬಳಿಕ ಕಳೆದ 5 ವರ್ಷಗಳಿಂದ ತಲೆ ಮರೆಸಿಕೊಂಡು ಓಡಾಡುತ್ತಿದ್ದ.