ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಂಭೀರ

ಸಾಂದರ್ಭಿಕ ಚಿತ್ರ

 ಉಪ್ಪಿನಂಗಡಿ : ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಬೈಕ್ ಸವಾರರಾದ ಇಳಂತಿಲದ ಚಂದ್ರಶೇಖರ್ (35) ಹಾಗೂ ಬೆಳಗಾವಿ ಮೂಲದ ಹಸನ್ ಆರೀಫ್ (30) ಗಂಭೀರ ಗಾಯಗೊಂಡವರು. ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದ ಎದುರು ರಾತ್ರಿ ಸುಮಾರು 8.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಉಪ್ಪಿನಂಗಡಿಯಿಂದ ಇಳಂತಿಲ ಕಡೆಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಜೆಸಿಬಿ ಅಪರೇಟರುಗಳಾಗಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.