ಬೈಕ್ ಮಗುಚಿ ಯುವಕ ಮೃತ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲ್ಪಟ್ಟ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಭೀಮನಡಿ ಬಳಿಯ ಕೊಡಕ್ಕಾಡ್ ಮುಟ್ಟೂಂಕಡವ್ ನಿವಾಸಿ ಅಫ್ಸಲ್ (23) ಸಾವನ್ನಪ್ಪಿದ ದುರ್ದೈವಿ. ಸೋಮವಾರ ಸಂಜೆ ಬೈಕಿನಲ್ಲಿ ರಾಜಪುರದಿಂದ ಮನೆಗೆ ಹಿಂತಿರುಗುತ್ತಿದ್ದ ದಾರಿ ಮಧ್ಯೆ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಗಂಭೀರ ಗಾಯಗೊಂಡು ಸಮೀಪದ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಇದೀಗ ಕೊನೆಯುಸಿರೆಳೆದಿದ್ದಾರೆ.