ಬೈಕ್ ಅಪಘಾತದಲ್ಲಿ ಸವಾರ ಮೃತ್ಯು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮೂಡುಬಿದಿರೆ : ಇನ್ನೊಂದು ವಾಹನವನ್ನು ಓವರ್ಟೇಕ್ ಮಾಡುವ ಭರಾಟೆಯಲ್ಲಿ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ಮೂಡುಬಿದಿರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಾಂಧಿನಗರ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ಯುವಕನನ್ನು ಪುತ್ತಿಗೆಯ ನಿವಾಸಿ ಚಂದ್ರಹಾಸ ಎಂಬವರ ಮಗ ಧನಂಜಯ (22) ಎಂದು ಗುರುತಿಸಲಾಗಿದೆ. ಈತ ಭಾನುವಾರ ಮಧ್ಯಾಹ್ನ ಬೈಕಿನಲ್ಲಿ ಮೂಡುಬಿದಿರೆಯಿಂದ ಪುತ್ತಿಗೆಯ ತನ್ನ ಮನೆಗೆ ಹಿಂದಿರುಗುವಾಗ ಗಾಂಧಿನಗರದಲ್ಲಿ ಕಾರೊಂದನ್ನು ಹಿಂದಿಕ್ಕಿ ಮುಂದಕ್ಕೆ ಹೋಗಲೆತ್ನಿಸಿದರು. ಎದುರುಗಡೆ ವಾಹನ ಬಂದಾಗ ಧನಂಜ0iÀiï ತನ್ನ ಬೈಕನ್ನು ಎಡಕ್ಕೆ ತಿರುಗಿಸಿದಾಗ ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈತ ವೃತ್ತಿಯಲ್ಲಿ ಕೂಲಿ ಕಾರ್ಮಿಕ. ಮೂಲತಃ ಸಾಗರದವರಾದ ಧನಂಜಯ ಕುಟುಂಬ ಪುತ್ತಿಗೆಯಲ್ಲಿ ಬಾಡಿಗೆ ಮನೆಯಲ್ಲಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮೂಡುಬಿದಿರೆ ಪೆÇಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.