ಲಾರಿ ಗುದ್ದಿ ಬೈಕ್ ಸವಾರ ದುರ್ಮರಣ

ನಮ್ಮ ಪ್ರತಿನಿಧಿ ವರದಿ

ಉಪ್ಪಿನಂಗಡಿ : ಓವರ್ಟೇಕ್ ಮಾಡುವ ಭರದಲ್ಲಿ ಈಚರ್ ಲಾರಿ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪೆರ್ನೆಯ ಕಡಂಬು ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಅಮೈ ನಿವಾಸಿ ಕಾಂತಪ್ಪ ಪೂಜಾರಿ ಪುತ್ರ ಗುರುಪ್ರಸಾದ್ (21) ಮೃತ ಬೈಕ್ ಸವಾರ.

ಅಮೈಯಿಂದ ಉಪ್ಪಿನಂಗಡಿ ಕಡೆಗೆ ಬೈಕಿನಲ್ಲಿ ಆಗಮಿಸುತ್ತಿದ್ದ ಈತನಿಗೆ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಲಾರಿ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈಚರ್ ಲಾರಿ ಚಾಲಕ ಬಸ್ಸೊಂದನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.