ಟಿಪ್ಪರ್ ಗುದ್ದಿ ಬೈಕ್ ಸವಾರ ದುರ್ಮರಣ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಕಾರವಾರ : ಕಿನ್ನರದ ಬೋರಿಬಾಗದ ಕ್ರಾಸಿನಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಿನ್ನರ ಹಳೆಕಟ್ಟಾ ನಿವಾಸಿ ಪ್ರಮೋದ ತಳೇಕರ್ ಮೃತಪಟ್ಟ ಸವಾರ. ಇವರು ಕಿನ್ನರದಿಂದ ಕಾರವಾರಕ್ಕೆ ಬರುತ್ತಿರುವಾಗ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮೃತಪಟ್ಟ ಸವಾರನ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY