ಲಾಠಿಪ್ರಹಾರ : ಬಿಜೆಪಿಯಿಂದ ಮುಖ್ಯಮಂತ್ರಿ ಪ್ರತಿಕೃತಿ ದಹನ

ಮುಖ್ಯಮಂತ್ರಿ ಪ್ರತಿಕೃತಿ ದಹಿಸಿದ ಬಿಜೆಪಿ ಯುವ ಕಾರ್ಯಕರ್ತರು

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಸೆಕ್ರೆಟರಿಯೇಟ್ ಮಾರ್ಚಿನಲ್ಲಿ ಪೆÇಲೀಸರು ನಡೆಸಿದ ಜಲ ಫಿರಂಗಿ ಹಾಗೂ ಲಾಠಿಪ್ರಹಾರದ ವಿರುದ್ಧ ಸೋಮವಾರ ಕುಂಬಳೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲ ಸಮಿತಿಯ ನೇತೃತ್ವದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರತಿಕೃತಿಯನ್ನು ದಹಿಸಿ ಪ್ರತಿಭÀಟನೆ ನಡೆಸಲಾಯಿತು.

ಪ್ರತಿಭಟನಾ ರ್ಯಾಲಿಯಲ್ಲಿ ಯುವಮೋರ್ಚಾ ಮಂಜೇಶ್ವರ ಮಂಡಲಾಧ್ಯಕ್ಷ ಸುಮಿತ್ ರಾಜ್ ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಪಾಲ್ಗೊಂಡರು.