94ಸಿ ಹಕ್ಕುಪತ್ರ ವಿಳಂಬಕ್ಕೆ ಆಕ್ರೋಶ : ತಾಲೂಕು ಕಚೇರಿಗೆ ಬಿಜೆಪಿ ಮುತ್ತಿಗೆ

ನಮ್ಮ ಪ್ರತಿನಿಧಿ ವರದಿ

ಕುಂದಾಪುರ : 94 ಸಿ ಹಕ್ಕುಪತ್ರ ವಿಳಂಬ ನೀತಿ ಖಂಡಿಸಿ, ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲಂಚಕ್ಕಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಳೆದ ಒಂದು ತಿಂಗಳ ಹಿಂದೆ ನಡೆದ ಧರಣಿ ಪ್ರತಿಭಟನೆಗೆ ಯಾವುದೇ ಪ್ರಯೋಜನ ದೊರಕಿಲ್ಲದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ಉಗ್ರವಾಗಿ ಹಮ್ಮಿಕೊಳ್ಳಲಾಗಿದೆ ಎಂದರು. ಇಲ್ಲಿ ಸುಮಾರು 11,840 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಒಂದೇ ಒಂದು ಹಕ್ಕುಪತ್ರವನ್ನೂ ನೀಡಲಾಗಿಲ್ಲ. ಎಲ್ಲಾ ಅರ್ಜಿಗಳನ್ನು ಪೆಂಡಿಂಗ್ ಇಡಲಾಗಿದೆ. ಅಧಿಕಾರಿಗಳು ತಮ್ಮ ಖಾಸಗಿ ಆಸ್ತಿಯನ್ನು ಬಡವರಿಗೆ ನೀಡುತ್ತಿರುವಂತೆ ದರ್ಪದಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

????????????????????????????????????
????????????????????????????????????

ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನಾ ಸಭೆ ಮುಗಿಸಿ ಮೆರವಣಿಗೆಯ ಮೂಲಕ ಮಿನಿ ವಿಧಾನ ಸೌಧದ ತನಕ ಜಾಥಾ ನಡೆಯಿತು. ಮಿನಿ ವಿಧಾನ ಸೌಧಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದರು.

ಮಿನಿ ವಿಧಾನ ಸೌಧದ ಬಳಿ ಆಗಮಿಸಡುತ್ತಿದ್ದಂತೆಯೇ ಅವರನ್ನು ತಡೆದು ಕೋಟ ಶ್ರೀನಿವಾಸ ಪೂಜಾರಿ ಅವರನ್ನೊಳಗೊಂಡಂತೆ ರಾಜೇಶ್ ಕಾವೇರಿ, ಶಂಕರ ಪೂಜಾರಿ ಸೇರಿದಂತೆ 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಲಾಯಿತು.

ಪ್ರತಿಭಟನೆಯಲ್ಲಿ 600ಕ್ಕೂ ಮಿಕ್ಕಿ ಫಲಾನುಭವಿಗಳು ಭಾಗವಹಿಸಿದ್ದರು.