ಮನಪಾ ನೀರು ಪೂರೈಕೆ ವೈಫಲ್ಯ : ಬಿಜೆಪಿ ಪ್ರತಿಭಟನೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಪಾಲಿಕೆ ಆಡಳಿತ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ವಲಯ ಬಿಜೆಪಿ ಸಮಿತಿ ವತಿಯಿಂದ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಿನ್ನೆ ನಡೆಯಿತು.

ಡ್ಯಾಂನಲ್ಲಿ ಸಾಕಷ್ಟು ನೀರಿದ್ದರೂ ಕೂಡಾ ಮೇಯರ್ ಕವಿತಾ ಸನಿಲ್ ಅವರು ಮಹಾನಗರಕ್ಕೆ ನೀರು ಪುರೈಕೆ ಮಾಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಮೋನಪ್ಪ ಭಂಡಾರಿ, ಯೋಗೀಶ್ ಭಟ್, ಪ್ರೇಮಾನಂದ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.