ಆಟವಾಡುತ್ತಿರುವಾಗ ಬಿದ್ದು ಗಾಯಗೊಂಡ ಬಾಲಕ ಮೃತ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಯಲ್ಲಾಪುರ : ತಾಲೂಕಿನ ಕಿರವತ್ತಿಯಲ್ಲಿ ಶುಕ್ರವಾರ ಮೈದಾನದಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬುದ್ಧ್ದಿಮಾಂದ್ಯ ಬಾಲಕನೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಹನುಮಂತ ಬಲ ರೆಡ್ಡಿ ಮೃತ ವಿದ್ಯಾರ್ಥಿಯಾಗಿದ್ದು, ಈತ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಓದುತ್ತಿದ್ದನೆನ್ನಲಾಗಿದೆ. ಶುಕ್ರವಾರ ವಸತಿಶಾಲೆಯ ಬಳಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಗಾಯಗೊಂಡ ಈತನನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.