ನಿರ್ಮಾಣವಾಗಿ 3 ವರ್ಷ ಕಳೆದರೂ ಸಂಚಾರಕ್ಕೆ ಮುಕ್ತವಾಗದ ಸೇತುವೆ

ಸಾಂದರ್ಭಿಕ ಚಿತ್ರ

ಸಾರ್ವಜನಿಕರಿಂದ ರಸ್ತೆ ತಡೆ

ನಮ್ಮ ಪ್ರತಿನಿಧಿ ವರದಿ

ಅಂಕೋಲಾ : ಪಟ್ಟಣದಿಂದ ಬೇಲೆಕೇರಿಗೆ ತೆರಳುವ ಮಾರ್ಗ ಮಧ್ಯದ ಕೇಣಿ ಸೇತುವೆ ನಿರ್ಮಿಸಿ 3 ವರ್ಷ ಕಳೆದರೂ ಇನ್ನೂ ಕೂಡ ಸಂಚಾರಕ್ಕೆ ಮುಕ್ತಗೊಳಿಸದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಬುಧವಾರ ರಸ್ತೆ ತಡೆ ನಡೆಸಿದರು.

ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದಿಂದ 1.25 ಕೋಟಿ ರೂ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಆದರೆ ಡಾಂಬರೀಕರಣ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರಿಂದಾಗಿ ವಾಹನದವರು ಪಕ್ಕದ ಕಿರುಸೇತುವೆಯಲ್ಲಿಯೇ ಸಂಚರಿಸುವಂತಾಗಿದೆ. ಇದರಿಂದಾಗಿ ಅನಾಹುತ ನಡೆಯುವ ಸಾಧ್ಯತೆಯಿದೆ. ಈ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನೆರೆದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪಂಚಾಯತರಾಜ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳು ಭೇಟಿ ನೀಡಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.