ಬಾಲಕಿ ಮೇಲೆ ಅತ್ಯಾಚಾರ: ಸಹೋದರ ಸೇರಿ ಇಬ್ಬರ ಸೆರೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿ ಸಹೋದರ ಸಂಬಂಧಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರವಲಯದ ಬೆಳ್ಮ ಗ್ರಾಮದ ರೆಂಜಾಡಿಯ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ಬಾಲಕಿಯ ನೆರೆಮನೆ ನಿವಾಸಿ ತಿಮ್ಮಪ್ಪ ಪೂಜಾರಿ (48) ಮತ್ತು ಬಾಲಕಿ ಸಹೋದರ ಸಂಬಂಧಿ ದಯಾನಂದ(23)ನನ್ನು ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಆಕೆ ಇದೀಗ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ತಿಮ್ಮಪ್ಪ ಮೂರು ವರ್ಷಗಳಿಂದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ನಡುವೆ ಒಂದು ಬಾರಿ ಆಕೆ ಗರ್ಭಿಣಿಯಾಗಿದ್ದಳು. ಎರಡು ವರ್ಷಗಳಿಂದ ಬಾಲಕಿ ಸಹೋದರ ಸಂಬಂಧಿ (ದೊಡ್ಡಮ್ಮನ ಮಗ) ಎ ಸಿ ಮೆಕ್ಯಾನಿಕ್ ಆಗಿರುವ ದಯಾನಂದ್ ಕೂಡಾ ಈತನ ಜೊತೆಗೆ ಬಾಲಕಿ ಮನೆಗೆ ಆಗಮಿಸಿ ಅತ್ಯಾಚಾರ ನಡೆಸಿದ್ದ ಎನ್ನಲಾಗಿದೆ.

ಬಾಲಕಿ ಗರ್ಭಿಣಿಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಇವರಿಬ್ಬರೂ ತನ್ನ ಮೇಲೆ ಅತ್ಯಾಚಾರ ನಡೆಸಿರುವುದನ್ನು ಬಾಲಕಿ ಒಪ್ಪಿಕೊಂಡಿದ್ದಾಳೆ.