ಬರಪೀಡಿತ ಜಿಲ್ಲೆಗಳ ಪ್ರವಾಸ : ಯಡ್ಡಿ-ಈಶ್ವರಪ್ಪ ಪೈಪೋಟಿ

ಬೆಂಗಳೂರು : ಬರಪೀಡಿತ ಜಿಲ್ಲೆಗಳಿಗೆ ತಾನು ಪ್ರವಾಸ ಮಾಡಿ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿಯೂರಪ್ಪ ಘೋಷಣೆ ಮಾಡಿರುವಂತೆಯೇ ಇತ್ತ ಈಶ್ವರಪ್ಪ ಕೂಡಾ ಮೂರು ದಿನಗಳ ಪ್ರವಾಸವನ್ನು ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗೆ ಇರಿಸಿಕೊಂಡಿದ್ದಾರೆ.

ವಿಜಯಪುರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಈಶ್ವರಪ್ಪ ಅಲ್ಲಿಗೆ ಭೇಟಿ ನೀಡಿ ಜನತೆ ಜೊತೆ ಸ್ಪಂದಿಸುವುದಾಗಿ ಹೇಳಿದ್ದಾರೆ.

ಹೈದ್ರಾಬಾದ್ ಕರ್ನಾಟಕದಿಂದ  ಪ್ರವಾಸ ಶುರು ಮಾಡಿ ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಹೇಳಿರುವ ಈಶ್ವರಪ್ಪ,  ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಅಭಿವೃದ್ಧಿ ಕಾರ್ಯದರ್ಶಿಗಳೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಬರಪೀಡಿತ ಜಿಲ್ಲೆಗಳಿಗೆ ಅನುದಾನ ಘೋಷಣೆ ಮಾಡುವ ಕುರಿತಂತೆ ಚರ್ಚಿಸಿದ್ದಾರೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಮತ್ತು ನೀರಿನ ಸಮಸ್ಯೆ ಬಗೆಹರಿಸಲು ಅನುದಾನ ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ.