ಚಾಲಕನ ನಿಯಂತ್ರಣ ತಪ್ಪಿ ಬಸ್ ತಗ್ಗಿಗೆ

ನಮ್ಮ ಪ್ರತಿನಿಧಿ ವರದಿ

ಪಡುಬಿದ್ರಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಟಪಾಡಿ-ಶಿರ್ವ ರಸ್ತೆಯ ಅಚ್ಚಡ ಬಳಿ ತಗ್ಗಿಗೆ ಹೋಗಿ ನಿಂತಿದ್ದು, ಶಾಲಾಗೆ ರಜೆ ಇದ್ದ ಕಾರಣ ಬಸ್ಸಿನಲ್ಲಿ ವಿದ್ಯಾರ್ಥಿಗಳು ಇರದ ಪರಿಣಾಮ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ ಉರುಳುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಬಸ್ ಚಾಲಕರ ನಿರ್ಲಕ್ಷ್ಯದಿಂದಲೋ, ರಸ್ತೆಯ ಸಮಸ್ಯೆಯಿಂದಲೋ ಎಂಬುದು ಸಂಬಂಧಪಟ್ಟ ಇಲಾಖೆಗಳು ಪರಿಶೀಲನೆ ನಡೆಸುವ ಅಗತ್ಯವಿದೆ ಎನ್ನುತ್ತಾರೆ ಸಾರ್ವಜನಿಕರು.