ರೋಹಿತ್ ಸಾವಿಗೆ ಕಾರಣದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ

ದಲಿತ ದಮನಿತರ ಹೋರಾಟ ಸಮಿತಿ ನಗರದಲ್ಲಿ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಿರುವುದು

ನಮ್ಮ ಪ್ರತಿನಿಧಿ ವರದಿ

ಉಡುಪಿ : ಹೈದಾರಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲನ ಸಾವಿಗೆ ಕಾರಣದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ದಲಿತ ದಮನಿತರ ಹೋರಾಟ ಸಮಿತಿ ನೇತೃತ್ವದಲ್ಲಿ ನೂರಾರು ನಾಗರಿಕರು ಮಂಗಳವಾರ ನಗರದ ಸರ್ವಿಸ್ ಬಸ್ ನಿಲ್ದಾಣ ಬಳಿಯ ಕ್ಲಾಕ್ ಟವರ್ ಎದುರು ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ದಮನಿತರ ಹೋರಾಟ ಸಮಿತಿಯ ಸಂಚಾಲಕ ಶ್ಯಾಮರಾಜ್ ಬಿರ್ತಿ, “ದಲಿತ ಬಡ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿ ರೋಹಿತ್ ವೇಮುಲಾನ ಸಾವಿಗೆ ಒಂದು ವರ್ಷ ಆಗಿದೆ. ಆತನ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಇಲ್ಲಿಯ ತನಕ ನ್ಯಾಯ ಸಿಗಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮು ಸೌಹಾರ್ದ ವೇದಿಕೆಯ ಮುಖಂಡ ಫಣಿರಾಜ್ ಮಾತನಾಡಿ, “ರೋಹಿತ್ ವೇಮುಲ ಸಾವಿಗೆ ಕಾರಣರಾದ ಬಿಜೆಪಿಯ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ, ತೆಲಂಗಾಣ ಶಾಸಕ ರಾಮಚಂದ್ರ ರಾವ್ ಹಾಗೂ ಕೇಂದ್ರ ಸಚಿವೆ ಸ್ಮತಿ ಇರಾಣಿ ವಿರುದ್ಧ ಕೇಸು ದಾಖಲಿಸಿ, ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.