ಒಂದೇ ಕುಟುಂಬದ ಐವರು ಗಂಭೀರ

ಮರಕ್ಕೆ ಓಮ್ನಿ ಡಿಕ್ಕಿ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ತಾಲೂಕಿನ ಮಣಿಹಳ್ಳ ಸಮೀಪದ ಬಡಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ಮೀರಿದ ಓಮ್ನಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮಕ್ಕಳ ಸಹಿತ ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಸ್ಥಳೀಯ ನಿವಾಸಿಗಳಾದ ಜರ್ಮನ್, ರೋಶನ್, ಲವಿಟ, ಸಿಸಿಲಿಯಾ ಬರೆಟ್ಟೋ, ಓಮ್ನಿ ಚಾಲಕ ರೋಬಿನ್, 1 ವರ್ಷದ ಮತ್ತು ಮೂರು ವರ್ಷದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ರೋಶನ್ ಇತ್ತೀಚೆಗಷ್ಟೆ ಊರಿಗೆ ಬಂದಿದ್ದು, ಕುಟುಂಬಿಕರೊಂದಿಗೆ ಬುಧವಾರ ಸಂಜೆ ಮಂಗಳೂರಿಗೆ

ತೆರಳಿ ವಾಪಾಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಣಿಹಳ್ಳ ಸಮೀಪದ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಮೀರಿದ ಓಮ್ನಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಓಮ್ನಿ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕಾಗಮಿಸಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

LEAVE A REPLY